-->
ಓಜಾಲದಲ್ಲಿ 16ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಓಜಾಲದಲ್ಲಿ 16ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಓಜಾಲದಲ್ಲಿ 16ನೇ ಮಕ್ಕಳ ಸಾಹಿತ್ಯ ಸಮ್ಮೇಳನ

      'ಮಕ್ಕಳ ಕಲಾ ಲೋಕ' ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ತನ್ನ 16ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಇದೇ ದಶಂಬರ್ 13ರಂದು ಓಜಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಜರಗಿಸಲಿದೆ. ತಾಲೂಕಿನ ಶಿಕ್ಷಣ ಇಲಾಖೆ ಮತ್ತು ಇದು ಗ್ರಾಮ ಪಂಚಾಯತು ಕೈಜೋಡಿಸಲಿದೆ. 
         ಓಜಾಲ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಶ್ರುತಿಕಾ, ಸಮ್ಮೇಳನಾಧ್ಯಕ್ಷೆಯಾಗಿರುವರು, 15ನೇ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ... 10ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಉದ್ಘಾಟಿಸುವರು. ಪುತ್ತೂರು ಪಾಣಾಜೆ ವಿವೇಕ ಹಿರಿಯ ಪ್ರಾಥಮಿಕ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಧನ್ವಿ ರೈ ಕೋಟೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
       ಹದಿನೆಂಟು ವಯೋಮಾನದೊಳಗಿನ ಸುಮಾರು ನಾಲ್ಕು ನೂರು ವಿದ್ಯಾರ್ಥಿಗಳು ಸಮ್ಮೇಳನದ ವಿವಿಧ ಚಟುವಟಿಕೆಗಲ್ಲಿ ಭಾಗವಹಿಸಲಿದ್ದಾರೆ. ಅವರೊಂದಿಗೆ ಶಿಕ್ಷಕರು ಮತ್ತು ಹೆತ್ತವರೂ ಆಗಮಿಸಲಿದ್ದಾರೆ. ಗ್ರಾಮಸ್ಥರನ್ನು ಸಮ್ಮೇಳನದಲ್ಲಿ ತೊಡಗಿಸಿಕೊಳ್ಳಲಾಗಿದೆ. ದಿನವಿಡೀ ಜರಗುವ ಮಕ್ಕಳ ವಿವಿಧ ಸಾಹಿತ್ಯ ಕಾರ್ಯಕ್ರಮಗಳಲ್ಲಿ ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರೇ, ಸ್ವಾಗತ, ನಿರ್ವಹಣೆ, ಧನ್ಯವಾದ, ಗೋಷ್ಠಿಗಳ ಅಧ್ಯಕ್ಷತೆಯನ್ನು ನಿರ್ವಹಿಸಲಿರುವರು. ಇಡ್ಕಿದು ಗ್ರಾಮ ಪಂಚಾಯತ್‌ ಅಧ್ಯಕ್ಷ ಎಂ. ಸುಧೀರ್ ಕುಮಾರ್ ಶೆಟ್ಟಿಯವರ ಗೌರವಾಧ್ಯಕ್ಷತೆ ಮತ್ತು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ. ಇವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು, ವಿವಿಧ ಉಪಸಮಿತಿಗಳನ್ನೂ ರಚಿಸಲಾಗಿದೆ. ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಸಾರ್ವಜನಿಕರು ಯಶಸ್ವಿಗೊಳಿಸಬೇಕೆಂದು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಚಿದಾನಂದ ಪೆಲತ್ತಿಜ ಹೇಳಿದರು.
       ಸಾಹಿತ್ಯ ರಚನೆ, ಆರು ಮಾತುಕತೆ, ಚಿತ್ತ ಚಿತ್ತಾರ ಮತ್ತು ಕಿರುನಾಟಕಗಳನ್ನು ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾಹಿತ್ಯ ರಚನೆಗೆ ವಿಷಯಗಳನ್ನು ಉದ್ಘಾಟನಾ ಪೂರ್ವದಲ್ಲೇ ತಿಳಿಸಲಾಗುವುದು, ಸಮರೋಪ ಸಮಾರಂಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ. ಮುಡಿಪು ಸರಕಾರಿ ಪ.ಪೂ ಕಾಲೇಜು ವಿದ್ಯಾರ್ಥಿನಿ ಲಾವಣ್ಯ ಸಮಾರೋಪ ಭಾಷಣ ನೀಡುವರು. ಸಾಹಿತ್ಯ ತಾರೆ ಮತ್ತು ಬಾಲಬಂಧು ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು, ಪೂರ್ವಾಹ್ನ ತಾಲೂಕು ಕ.ಸಾ.ಪ. ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪರಿಷತ್ ಧ್ವಜಾರೋಹಣವನ್ನು ಮತ್ತು ಚಿದಾನಂದ ಪೆಲತ್ತಿಂಜ ಕನ್ನಡ ಧ್ವಜಾರೋಹಣವನ್ನು ನಿರ್ವಹಿಸುವರು. ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆ ಮಕ್ಕಳ ಸ್ವರಚಿತ ಸಾಹಿತ್ಯ ಕೃತಿಗಳನ್ನು ಬಿಡುಗಡೆ ಮಾಡುವರು. ಭಾಗವಹಿಸುವ ತಮ್ಮ ಶಾಲೆಯಿಂದ ಭಾಗವಹಿಸಲಿರುವ ಮಕ್ಕಳ ಒಟ್ಟು ಸಂಖ್ಯೆಯನ್ನು ಶಾಲೆಯ ಹೆಸರು ಸಮೇತ ಮೊಬೈಲ್ ಸಂಖ್ಯೆ 9449817428 ಇದಕ್ಕೆ ತಿಳಿಸಿ ವ್ಯವಸ್ಥೆಗೆ ಸಹಕರಿಸಬೇಕು ಎಂದು ಓಜಾಲ ಶಾಲಾ ಮುಖ್ಯೋಪಾಧ್ಯಾಯ ಸಂಜೀವ ಮಿತ್ತಳಿಕೆ ಹೇಳಿದರು.
      ಪತ್ರಿಕಾ ಗೋಷ್ಟಿಯಲ್ಲಿ ಮಕ್ಕಳ ಕಲಾ ಲೋಕದ ಕಾರ್ಯದರ್ಶಿ ಶಿವರಾಮ ಭಟ್ ನೆಡೆ, ಉಪಾಧ್ಯಕ್ಷ ವಿಲ್ಲಾ ಸಿಕ್ವೇರಾ ಸ್ವಾಗತ ಸಮಿತಿಯ ಕೋಶಾಧಿಕಾರಿ ಸುಮಯ್ಯ ಉಪಸ್ಥಿತರಿದ್ದರು.





Ads on article

Advertise in articles 1

advertising articles 2

Advertise under the article