ಮಕ್ಕಳ ಕರ್ನಾಟಕ ರಾಜ್ಯೋತ್ಸವ -2023 : ಬಾಲ ಪ್ರಶಸ್ತಿಗೆ ಅರ್ಜಿ ಆಹ್ವಾನ
Tuesday, November 14, 2023
Edit
ಮಕ್ಕಳ ಕರ್ನಾಟಕ ರಾಜ್ಯೋತ್ಸವ -2023
ಬಾಲ ಪ್ರಶಸ್ತಿಗೆ ಅರ್ಜಿ ಆಹ್ವಾನ
ಇನ್ವೆಂಜರ್ ಫೌಂಡೇಷನ್ ಮಂಗಳೂರು, ಸೃಷ್ಠಿ ಫೌಂಡೇಶನ್ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ ವತಿಯಿಂದ ನೀಡಲಾಗುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿಗೆ ಅರ್ಹ ಪ್ರತಿಭಾವಂತ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
5ರಿಂದ 18ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಚಿತ್ರಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಬಹುಮುಖ ಪ್ರತಿಭೆಗಳನ್ನು ಬಾಲಪ್ರಶಸ್ತಿಗೆ ಪರಿಗಣಿಸಲಾಗುವುದು.
ಯಾವುದೇ ಕ್ಷೇತ್ರದಲ್ಲಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಸಾಧನೆಗಳ ಕುರಿತ ಸವಿವರ ಮಾಹಿತಿಯನ್ನು ಸೂಕ್ತ ಸ್ವಯಂ ದೃಢೀಕರಣ ಮಾಡಿ ಅರ್ಜಿಯನ್ನು ನವೆಂಬರ್ 25ರೊಳಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು. ಕಾಮತ್ ಸರ್ವಿಸಸ್,
ಎಸ್ ವಿ ಎಸ್ ಹಿರಿಯ
ಪ್ರಾಥಮಿಕ ಶಾಲೆ ಎದುರು
ಹಳೇ ರಸ್ತೆ ಕಟಪಾಡಿ ಅಂಚೆ ಉಡುಪಿ ಜಿಲ್ಲೆ
ಪಿನ್ ಕೋಡ್ - 574105
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕೆ.ನಾಗೇಶ್ ಕಾಮತ್ - 9886432197,
ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭಾ ಪ್ರದರ್ಶನಕ್ಕೂ ಅವಕಾಶ ನೀಡಿ ಸೂಕ್ತ ವೇದಿಕೆ ಕಲ್ಪಿಸುವ ವಿನೂತನ ಕಾರ್ಯಕ್ರಮವನ್ನು ನವೆಂಬರ್ ತಿಂಗಳಾಂತ್ಯಕ್ಕೆ ಆಯೋಜಿಸಲಾಗಿದೆ. ಇದೇ ವೇಳೆ ಗಾನಗಂಧರ್ವ ಎಸ್ ಪಿ ಬಿ ಸಂಗೀತೋತ್ಸವ ಹಾಗೂ ಮಕ್ಕಳ ಸ್ನೇಹಿ ಪತ್ರಕರ್ತ ಶೇಖರ್ ಅಜೆಕಾರ್ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.